ಇಂದು ಐಪಿಎಲ್ ನಲ್ಲಿ ಎರಡು ಪಂದ್ಯಗಳಿದ್ದು ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾದರೆ, ಮತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾದಾಟ ನಡೆಸಲಿವೆ. ಒಟ್ಟಾರೆ ಇಂದು ಐಪಿಎಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವೇ ಸಿಗಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಈ ಎರಡು ತಂಡಗಳಿಗೂ ಇದು ಮೂರನೆ ಐಪಿಎಲ್ ಆಗಿದೆ. ಗುಜರಾತ್ ತಂಡ ಬಂದ ವರ್ಷದಲ್ಲೇ ಟ್ರೋಫಿ ಎತ್ತಿ ಹಿಡಿಯುವ ಮೂಲಕ ನಿಬ್ಬೆರಗಾಗುವಂತೆ ಮಾಡಿದ್ದು, ಕಳೆದ ವರ್ಷವೂ ಈ ತಂಡ ಫೈನಲ್ ಗೆ ಎಂಟ್ರಿ ಕೊಟ್ಟಿತ್ತು. ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ ಬಲಿಷ್ಠ ತಂಡವಾಗಿದ್ದು, ಕನ್ನಡಿಗ ಕೆ ಎಲ್ ರಾಹುಲ್ ತುಂಬಾ ಉತ್ತಮವಾಗಿ ನಾಯಕತ್ವ ನಿರ್ವಹಿಸುತ್ತಿದ್ದಾರೆ.