
ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 42 ರನ್ ಗಳಿಂದ ಜಯಭೇರಿಯಾಗುವ ಮೂಲಕ ಐಪಿಎಲ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ. ಬ್ಯಾಕ್ ಟು ಬ್ಯಾಕ್ ಜಯ ಕಂಡಿರುವ ಆರ್ಸಿಬಿ ತಂಡ ಮುಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕಾಗಿದೆ.
ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ಮತ್ತು ಕೆಕೆಆರ್ ಮುಖಾಮುಖಿಯಾಗಲಿವೆ. ಈಗಾಗಲೇ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಕೆಕೆಆರ್ ತಂಡ ಪ್ಲೇ ಆಫ್ ಸ್ಥಾನ ಭದ್ರಪಡಿಸಿಕೊಂಡಿದ್ದರೆ, ಗುಜರಾತ್ ಟೈಟನ್ಸ್ ಪ್ಲೇ ಆಫ್ ಗೆ ಎಂಟ್ರಿ ಕೊಡಲು ದೊಡ್ಡ ಅಂತರದಿಂದ ಗೆಲ್ಲಬೇಕಾಗಿದೆ. ಹಾಗಾಗಿ ಗುಜರಾತ್ ಟೈಟನ್ಸ್ ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.