alex Certify ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ನಾಲ್ವರು ಬಲಿ,15 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ನಾಲ್ವರು ಬಲಿ,15 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ….!

ಗುಜರಾತ್ ನ ವಡೋದರದಲ್ಲಿರುವ ಕ್ಯಾಂಟನ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿ, ಸುಮಾರು 15ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಲ್ಲಿಯ ಮಕರಪುರ ಜಿಐಡಿಸಿ ವ್ಯಾಪ್ತಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆ ಸುಮಾರು 3 ಕಿ.ಮೀಗೂ ಅಧಿಕ ದೂರಕ್ಕೆ ಕೇಳಿ ಬಂದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, ಘಟನೆ ಬೆಳಿಗ್ಗೆಯೇ ಸಂಭವಿಸಿದೆ ಎನ್ನಲಾಗಿದೆ.

ಅಲ್ಲದೇ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸುತ್ತಮುತ್ತಲಿನ ಸಂಚಾರವನ್ನು ಕೆಲವು ಸಮಯದವರೆಗೆ ನಿರ್ಬಂಧಿಸಲಾಗಿತ್ತು. ಗಾಯಗೊಂಡವರಲ್ಲಿ ಹಲವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...