
ಅಹಮದಾಬಾದ್: ಮಹಾಕುಂಭ ಮೆಳಕ್ಕೆ ತೆರಳುತ್ತಿದ್ದ ಕರ್ನಾಟಕದ ಇಬ್ಬರು ಭಕ್ತರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಫೋರಬಂದರ್ ನಲ್ಲಿ ನಡೆದಿದೆ.
ವಿಜಯಪುರದ ಹಲವು ಭಕ್ತರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದರು. ನಿಂತಿದ್ದ ಟಿಪ್ಪರ್ ಗೆ ಭಕ್ತರು ತೆರಳುತ್ತಿದ್ದ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ವಿಜಯಪುರ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.