alex Certify BIG BREAKING: ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಗಾಂಧಿನಗರ: ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಗುಜರಾತ್ ಸಿಎಂ ಸ್ಥಾನಕ್ಕೆ ಅಚ್ಚರಿ ಹೆಸರನ್ನು ಬಿಜೆಪಿ ಘೋಷಿಸಿದೆ.

ಗುಜರಾತ್ ಸಿಎಂ ಸ್ಥಾನಕ್ಕೆ ನಿನ್ನೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಗುಜರಾತ್ ಗಾಂಧಿನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಘೋಷಿಸಲಾಯಿತು.

ಬಿಎಲ್ ಪಿ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನರೇಂದ್ರ ಸಿಂಗ್ ತೋಮರ್ ಬಿಜೆಪಿ ವೀಕ್ಷಕರಾಗಿ ಆಗಮಿಸಿದ್ದರು.  ಮನ್ ಸುಖ್ ಮಾಂಡವೀಯ, ಸಿಆರ್. ಪಟೇಲ್ , ನಿತಿನ್ ಪಟೇಲ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.  ಸಿಎಂ ಸ್ಥಾನಕ್ಕಾಗಿ ನಿತಿನ್ ಪಟೇಲ್ ಹಾಗೂ ಸಿ ಆರ್ ಪಟೇಲ್ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ಆದರೀಗ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...