ಬಾಗಲಕೋಟೆ : ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗುಳೇದಗುಡ್ಡ ಬಂದ್ ಗೆ ಕರೆ ಕೊಟ್ಟಿವೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಬಕ್ರೀದ್ ಹಬ್ಬದ ದಿನ ಗೋಹತ್ಯೆ ಹಿನ್ನೆಲೆಯಲ್ಲಿ ಗುಳೇದಗುಡ್ಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆ ಕರೆ ಕೊಟ್ಟಿದ್ದು, ಗುಳೇದಗುಡ್ಡದಲ್ಲಿ ಎಲ್ಲಾ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ.
ಗುಳೇದಗುಡ್ಡ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇಬ್ಬರು ಡಿವೈಎಸ್ ಪಿ, ಐವರು ಸಿಪಿಐ, 11 ಪಿಎಸ್ ಐ, 115 ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ.