ಆರ್.ಎಸ್.ಎಸ್ ಕಚೇರಿಗೆ ಗೂಳಿಹಟ್ಟಿ ಶೇಖರ್ ಗೆ ಪ್ರವೇಶ ನಿರಾಕರಣೆ ಆರೋಪ; ಆಡಿಯೋ ವೈರಲ್

ಬೆಂಗಳೂರು: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ನಾಗಪುರದ ಆರ್.ಎಸ್.ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವುದನ್ನು ಸ್ಪಷ್ಟಪಡಿಸುವುವಿರಾ? ಎಂದು ಗೂಳಿಹಟ್ಟಿ ಶೇಖರ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಕೇಳಿದ್ದು ಈ ಬಗ್ಗೆ ಆಡಿಯೋ ವೈರಲ್ ಆಗಿದೆ.

ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಆಡಳಿತಾರೂಢ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಆರ್.ಎಸ್.ಎಸ್ ವಿರುದ್ಧ ಮುಗಿಬಿದ್ದಿದ್ದಾರೆ.

ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನನಗೆ ಈ ಬಗ್ಗೆ ಮಾಹಿತಿ ಇಲ್ಲ. ತಿಳಿದುಕೊಂಡು ಮಾತನಾಡುತ್ತೇನೆ ಎಂದಷ್ಟೇ ಹೇಳಿದ್ದಾರೆ. ಬಿಜೆಪಿ ನಾಯಕರ ನಡೆ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read