ನಾನು ಕಾಂಗ್ರೆಸ್ ಸೇರುವ ವಿಚಾರ ಸತ್ಯಕ್ಕೆ ದೂರವಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
ಸುಳ್ಳುಸುದ್ದಿ ಹಬ್ಬಿಸಿ ರಾಜಕೀಯ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ ಎನ್ನುವ ಸುಳ್ಳು ಪ್ರಚಾರದಿಂದಾಗಿ ಕ್ಷೇತ್ರದ ಜನರ ಎದುರು, ಸರ್ಕಾರದ ಮಟ್ಟದಲ್ಲಿ ಮುಜುಗರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
‘ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎನ್ನುವ ವದಂತಿ ಸತ್ಯಕ್ಕೆ ದೂರವಾದದ್ದು
ನನ್ನ ರಾಜಕೀಯ ವಿರೋಧಿಗಳು ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ
ಸುಳ್ಳು ಸುದ್ದಿ ಹಬ್ಬಿಸಿ ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ
ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ ಎನ್ನುವುದು ಕೂಡ ಸುಳ್ಳು
ಇಂಥ ಅಪಪ್ರಚಾರದಿಂದ ಕ್ಷೇತ್ರದ ಜನರ ಎದುರು ಮತ್ತು ಸರ್ಕಾರದ ಮಟ್ಟದಲ್ಲಿ ಮುಜುಗರವಾಗುತ್ತಿದೆ’
ವಿರೋಧಿಗಳು ಹಬ್ಬಿಸುವ ಇಂಥ ಆಧಾರರಹಿತ ಸುದ್ದಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.