
ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲು ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ನಾಡ ಪಿಸ್ತೂಲ್ ಹೊಂದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ 4 ನಾಡ ಪಿಸ್ತೂಲ್, 18 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಲಬುರ್ಗಿ ಜಿಲ್ಲೆ ಅಫಜಲಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಭೀಮಣ್ಣ ಪೂಜಾರಿ, ಸಿದ್ದಪ್ಪ ಪೂಜಾರಿ, ಸಲೀಂ ಶಿರಸಗಿ, ಪರಸಯ್ಯ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.