ಬೆಂಗಳೂರು : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಕೆಪಿಸಿಸಿ) ಸ್ಥಾನದಿಂದ ಗುರಪ್ಪ ನಾಯ್ಡು ಅವರನ್ನು 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟನೆ ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿತ್ತು.
ತ್ಯಾಗರಾಜನಗರದ ಬಿಜಿಎಸ್ ಬ್ಲೂಮ್ ಫೀಲ್ಡ್ ಶಾಲೆಯಲ್ಲಿ ಅಧ್ಯಕ್ಷರೂ ಆಗಿರುವ ಗುರಪ್ಪ ನಾಯ್ಡು ಶಿಕ್ಷಕಿಯರ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿ ಅದರ ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕುತ್ತಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆ ಅವರನ್ನು 6 ವರ್ಷ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ ಎನ್ನಲಾಗಿದೆ.