
ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಸೃಜನಶೀಲ ನಿರ್ದೇಶಕರು ಹಾಗೂ ಕನಕಪುರ ಮೂಲದವರೇ ಆದ ಗುರುಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಗಿದೆ. ಬೆಳ್ಳಿತೆರೆ ಹಾಗೂ ಕಿರುತೆರೆಗೆ ತಮ್ಮದೇ ಶೈಲಿಯ ಕೊಡುಗೆ ನೀಡಿದ ಗುರುಪ್ರಸಾದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರು ಹಾಗೂ ಆತ್ಮೀಯರ ನೋವಿನಲ್ಲಿ ನಾನೂ ಕೂಡ ಭಾಗಿ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸೃಜನಶೀಲ ನಿರ್ದೇಶಕರು ಹಾಗೂ ಕನಕಪುರ ಮೂಲದವರೇ ಆದ ಶ್ರೀ ಗುರುಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಗಿದೆ. ಬೆಳ್ಳಿತೆರೆ ಹಾಗೂ ಕಿರುತೆರೆಗೆ ತಮ್ಮದೇ ಶೈಲಿಯ ಕೊಡುಗೆ ನೀಡಿದ ಗುರುಪ್ರಸಾದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರು ಹಾಗೂ ಆತ್ಮೀಯರ ನೋವಿನಲ್ಲಿ ನಾನೂ ಕೂಡ ಭಾಗಿ.… pic.twitter.com/dd37rmz79m
— DK Shivakumar (@DKShivakumar) November 3, 2024