ಸೆಪ್ಟೆಂಬರ್ 9ರಂದು ತೆಲಂಗಾಣದ ಸೈದಾಬಾದ್ನಲ್ಲಿ ನಡೆದ ಆರು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಕೂಗು ಕೇಳಿ ಬರುತ್ತಿದೆ.
ತೆಲುಗು ಸೂಪರ್ಸ್ಟಾರ್ ಮಹೇಶ್ ಬಾಬು ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣವು ನಮ್ಮ ಸಮಾಜ ಎಷ್ಟು ಕುಸಿದಿದೆ ಅನ್ನೋದನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.
28 ಮಿಲಿಯನ್ ವೀಕ್ಷಣೆ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಟೀಸರ್
ನಮ್ಮ ಹೆಣ್ಣು ಮಕ್ಕಳು ಸುರಕ್ಷಿತವಾಗಿದ್ದಾರೆಯೇ..? ಈ ಪ್ರಶ್ನೆಯೂ ಎಂದಿಗೂ ನನ್ನನ್ನು ಕಾಡಲಿದೆ. ಕರುಳು ಹಿಂಡಿದಂತೆ ಆಗುತ್ತದೆ. ಆ ಕುಟುಂಬದ ಸ್ಥಿತಿ ಹೇಗಿರಬಹುದು ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಮಹೇಶ್ ಬಾಬು ಟ್ವೀಟಾಯಿಸಿದ್ದಾರೆ. ಮತ್ತೊಂದು ಟ್ವೀಟ್ನಲ್ಲಿ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸೆಪ್ಟೆಂಬರ್ 9ರಂದು 6 ವರ್ಷದ ಬಾಲಕಿಯ ಮೇಲೆ ನೆರೆಮನೆಯ ಪಲ್ಲಕೊಂಡ ರಾಜು ಅತ್ಯಾಚಾರ ನಡೆಸಿ ಕೊಲೆಗೈದಿದ್ದ. ಆರೋಪಿಯ ಪತ್ತೆಗೆ ಲುಕ್ಔಟ್ ನೋಟಿಸ್ ಜಾರಿ ಮಾಡಿರುವ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಘೋಷಣೆ ಮಾಡಿದ್ದಾರೆ.
ಆರು ವರ್ಷದ ಬಾಲಕಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆಕೆಯ ತಂದೆ ಆಟೋ ಚಾಲಕ ಸಾಕಷ್ಟು ಹುಡುಕಾಟ ನಡೆಸಿದ್ದರು. ಬಳಿಕ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿತ್ತು. ಕೊನೆಗೆ ಬಾಲಕಿಯ ಮೃತದೇಹ ನೆರೆಮನೆಯಲ್ಲಿ ಪತ್ತೆಯಾಗಿತ್ತು.