ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯ, ಸ್ಥಳ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಇಲಾಖೆಗೆ ಅನುಮತಿ ನೀಡಿದ್ದು, ಇದಕ್ಕೆ ಈಗ ಅಲಹಾಬಾದ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅಕ್ಟೋಬರ್ 31ರವರೆಗೆ ಈ ತಡೆಯಾಜ್ಞೆ ವಿಧಿಸಿರುವ ನ್ಯಾಯಮೂರ್ತಿ ಪ್ರಕಾಶ್ ಅವರು, ವಾದ – ಪ್ರತಿವಾದ ಆಲಿಸಿದ ಬಳಿಕ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 18ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಇದರ ಮಧ್ಯೆ ಜ್ಞಾನವಾಪಿ ಮಸೀದಿ ವಿವಾದದಲ್ಲಿ ಅರ್ಜಿ ಸಲ್ಲಿಸಿರುವ ಮಹಿಳೆಯರ ಪರ ವಕೀಲರ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ ಎನ್ನಲಾಗಿದ್ದು, ಇಲ್ಲಿ ಸಿಕ್ಕಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಗೆ ನ್ಯಾಯಾಲಯದಲ್ಲಿ ಪರ ಹಾಗೂ ವಿರೋಧ ವ್ಯಕ್ತಪಡಿಸಿದ್ದಾರೆ.