alex Certify BIG NEWS: ಬಡತನವೇ ಬೇರೆ ಜಾತಿ ಆಧಾರಿತ ಸಾಮಾಜಿಕ ಅಸಮಾನತೆಯೇ ಬೇರೆ; ನಟ ಉಪೇಂದ್ರ ಸ್ಪಷ್ಟನೆಗೆ ಸಚಿವ ಮಹಾದೇವಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಡತನವೇ ಬೇರೆ ಜಾತಿ ಆಧಾರಿತ ಸಾಮಾಜಿಕ ಅಸಮಾನತೆಯೇ ಬೇರೆ; ನಟ ಉಪೇಂದ್ರ ಸ್ಪಷ್ಟನೆಗೆ ಸಚಿವ ಮಹಾದೇವಪ್ಪ ತಿರುಗೇಟು

ಬೆಂಗಳೂರು: ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್.ಸಿ.ಮಹದೇವಪ್ಪ, ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಕಿಡಿಕಾರಿದ್ದಾರೆ.

ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಇಂತಹ ವ್ಯಕ್ತಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯು ಉಪೇಂದ್ರ ಅವರಿಗೆ ಸಹಜವಾಗಿ ತಿಳಿದಿಲ್ಲ ಎಂದು ಕಾಣುತ್ತದೆ.ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿದೆ? ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಮುಂದೆ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಸಮಾನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...