
ಬೆಂಗಳೂರು: ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆದ 187 ಕೋಟಿ ರೂ.ಹಗರಣ ಸಂಬಂಧ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ. ಹಗರಣದ ಪ್ರಮುಖ ರೂವಾರಿ ಆಗಿರುವ ಸಚಿವ ಹೆಚ್.ಸಿ.ಮಹದೇವಪ್ಪ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತರೆಂದು ರಕ್ಷಣೆ ಮಾಡುವ ಬದಲು ಮೊದಲು ಸಚಿವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.