![](https://kannadadunia.com/wp-content/uploads/2021/03/hdd-new.jpg)
ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಪಕ್ಷ ಭೇದ ಮರೆತು ಒಗ್ಗಟ್ಟಿನಲ್ಲಿ ಹೋರಾಟ ನಡೆಸೋಣ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಕರೆ ನೀಡೀದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡ, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಎಲ್ಲಾ ಪಕ್ಷಗಳು ಸೇರಿ ಮಹದಾಯಿಗಾಗಿ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಶಕ್ತಿ ಮೀರಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ನಾನು ಇನ್ನೂ 4-5 ವರ್ಷ ಬದುಕಿರುತ್ತೇನೆ. ನನ್ನ ಕೊನೇ ಉಸಿರಿರುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
ಮಹದಾಯಿ ನದಿ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟಿಸಿ ಅರ್ಜಿ ಹಾಕಿದೆ. ವಿವಾದ ಕೋರ್ಟ್ ನಲ್ಲಿರುವಾಗ ಪ್ರಧಾನಿ ಏನು ಮಾಡುತ್ತಾರೆ? ಹಾಗಾಗಿ ನಮ್ಮವರು ಕೋರ್ಟ್ ನಲ್ಲಿ ಪ್ರಬಲ ವಾದ ಮಂಡನೆ ಮಾಡಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದು ಹೇಳಿದರು.