ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಾಳೆ ಭಾನುವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಭೇಟಿ ನೀಡಲಿದ್ದಾರೆ.
ನಾಳೆ ಮುಂಜಾನೆ 7 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ ಹೊರಟು ಮಧ್ಯಾಹ್ನ 12:15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಹೊರಟು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ (VISL)ಗೆ ಭೇಟಿ ನೀಡಲಿದ್ದಾರೆ.
ಈ ವೇಳೆ ವಿಐಎಸ್ ಎಲ್ ಕಾರ್ಮಿಕರು ಹಾಗೂ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಲಿದ್ದು, ಬಳಿಕ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ದಿನವೇ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆಯ ಸ್ಥಿತಿಗತಿ ಕುರಿತಾಗಿ ಸಂಪೂರ್ಣ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಇದೀಗ ನಾಳೆ ವಿಐಎಸ್ ಎಲ್ ಗೆ ಕುಮಾರಸ್ವಾಮಿ ಭೇಟಿ ಮಹತ್ವ ಪಡೆದುಕೊಂಡಿದೆ.