
ಬೆಂಗಳೂರು: ಕಾಂಗ್ರೆಸ್ ನಾಯಕರು ನನ್ನನ್ನು ಕೆಣಕುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ನಾನು ನೋಡುತ್ತಿದ್ದೇನೆ. ನನ್ನನ್ನು ಕೆರಳಿಸಬೇಕೆಂಬ ಉದ್ದೇಶದಿಂದ ಅಂತಹ ಹೇಳಿಕೆ ಕೊಡುತ್ತಿದ್ದಾರೆ. ಅವರ ಹೇಳಿಕೆಗಳಿಗೆ ನಾನು ಉತ್ತರ ಕೊಡುವ ಗೋಜಿಗೆ ಹೋಗಲ್ಲ. ಅದಕ್ಕೆ ಕಾಲವೇ ಉತ್ತರ ಕೊಡುತ್ತದೆ ಎಂದಿದ್ದಾರೆ.
ಇನ್ನು ಯಧುವೀರ್ ಒಡೆಯರ್ ಅವರು ನಿಖಿಲ್ ಕುಮಾರಸ್ವಾಮಿ ಪರ ಇಂದು ಪ್ರಚಾರ ನಡೆಸುತ್ತಿದ್ದಾರೆ. ಅವರು ತಾವಾಗಿಯೇ ಸಮಯ ಮಾಡಿಕೊಂಡು ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ. ಅವರಿಗೆ ರಾಮನಗರದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರೊಂದಿಗೆ ನಾನೂ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಿಖಿಲ್ ಪರ ಯಧುವೀರ್ ಕೃಷ್ಣದತ್ತ ಒಡೆಯರ್ ಪ್ರಚಾರ ನಡೆಸುತ್ತಿರುವುದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.