ರಾಜ್ಯದ ಎರಡು ಕ್ಷೇತ್ರದ ಉಪಚುನಾವಣೆ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡವಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾ ಜನಾರ್ಧನನ ತೀರ್ಪಿಗೆ ತಲೆಬಾಗಿದ್ದೇನೆ ಎಂದು ತಿಳಿಸಿದ್ದಾರೆ.
ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆ ನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು. ಜನರ ಆಶಿರ್ವಾದದಿಂದ ಪ್ರಧಾನಿಯಾದರು. ಉಪ ಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನ ಹರಿಸುತ್ತೇನೆ ಎಂದು ತಿಳಿಸಿದ್ದಾರೆ.