ಬೆಂಗಳೂರು: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಪ್ರವಾಹ ಮತ್ತು ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದ ರೈತರನ್ನು ಉಳಿಸಿಕೊಳ್ಳುವ ಉದ್ದೇಶದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬಿದೆ ಇದ್ದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ರೈತರಿಗೆ ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಬೆಳೆ ಹಾನಿ, ಆಸ್ತಿ ನಷ್ಟ, 2 ಹೊತ್ತು ಊಟಕ್ಕೂ ಪರದಾಡುವಂತಹ ಪರಿಸ್ಥಿತಿಗೆ ಬಂದಿರುವ ಅನ್ನದಾತರು ಆತ್ಮಹತ್ಯೆಗೆ ಶರಣಾಗದಂತೆ ಎಚ್ಚರ ವಹಿಸುವ ಮೂಲಕ ಸಂಭವನೀಯ ಸರಣಿ ಆತ್ಮಹತ್ಯೆಯ ಆತಂಕಕಾರಿ ಬೆಳವಣಿಗೆಯನ್ನು ಆರಂಭದಲ್ಲೇ ಚಿವುಟಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.