ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಡಿಜಿಪಿ ಚಂದ್ರಶೇಖರ್ ನೀಡಿರುವ ದೂರಿನ ಅನ್ವಯ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಹಾಗೂ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿದೆ.
ತೊಂದರೆ ಕೊಡುವುದಾಗಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಇತರರಿಂದ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕುಮಾರಸ್ವಾಮಿ ಹಾಗೂ ಇತರರ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.