
ಹಾಸನ: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡಿ ಮನೆದೇವರ ದರ್ಶನ ಪಡೆದುಕೊಂಡಿದ್ದಾರೆ.
ಮೈಸೂರಿನಿಂದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಗೆ ಆಗಮಿಸಿದ ಅವರು ಮನೆ ದೇವರು ದೇವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ ತೆರಳಿದ್ದಾರೆ.