
ಮೈಸೂರು: ‘2023 ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೂಪಿಸಿದ ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತದೆ. ಅದು ಸಾಧ್ಯವಾಗದಿದ್ದರೆ ಪಕ್ಷವನ್ನೇ ಮುಚ್ಚುತ್ತೇನೆ.’
ಹೀಗೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಬನ್ನೂರು ಸಮೀಪ ತುರಗನೂರು ಗ್ರಾಮದಲ್ಲಿ ಜೆಡಿಎಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಪಂಚರತ್ನ ಯೋಜನೆ ರೂಪಿಸಲಾಗಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಅದನ್ನು ಜಾರಿ ಮಾಡುತ್ತೇವೆ ಮಾಡಲು ಸಾಧ್ಯವಾಗದಿದ್ದರೆ ಪಕ್ಷವನ್ನೇ ಮುಚ್ಚುತ್ತೇವೆ. ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಎಲ್ಕೆಜಿ ಇಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.