BIG NEWS: ರಾಮನವಮಿ ಹಿನ್ನೆಲೆ: ಕೆರಗೋಡು ಮಂದಿರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದ್ದ ಸರ್ಕಾರದ ಆದೇಶದ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದ ಘಟನೆಗಳ ಬಳಿಕ ಇದೀಗ ರಾಮನವಮಿ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಕೆರಗೋಡು ದೇವಾಲಯದಲ್ಲಿ ವಿಶೆಷ ಪೂಜೆ ಸಲ್ಲಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮದಲ್ಲಿ ಮತಯಾಚನೆಗೂ ಮುನ್ನ ರಾಮನವಮಿ ಪ್ರಯುಕ್ತ ಹನುಮ ಮಂದಿರದವರೆಗೆ ಮೆರವಣಿಗೆಯಲ್ಲಿ ಸಾಗಿದ ಹೆಚ್,ಡಿ.ಕುಮಾರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ದೇವಾಲಯದಲ್ಲಿ ನೆರೆದಿದ್ದ ನೂರಾರು ಭಕ್ತರಿಗೆ ರಾಮನವಮಿ ಶುಭಕೋರಿದರು. ಬಳಿಕ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮತಯಾಚಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read