
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಮಂಡ್ಯ ಕ್ಷೇತ್ರಕ್ಕಾಗಿ ಒಂದೆಡೆ ಜೆಡಿಎಸ್ ಪೈಪೋಟಿ ನಡೆಸಿದ್ದರೆ ಮತ್ತೊಂದೆಡೆ ಬಿಜೆಪಿ ಕೂಡ ತಮ್ಮದೇ ಅಭ್ಯರ್ಥಿ ಕಣಕ್ಕಿಳಿಸಲು ಯತ್ನ ನಡೆಸಿವೆ. ಇನ್ನೊಂದೆಡೆ ಸಂಸದೆ ಸುಮಲತಾ ತಾನು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮಂಡ್ಯ ಕ್ಷೇತ್ರ ಉಳಿಸಿಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.
ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯೇ ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಕುಮಾರಸ್ವಾಮಿ ಕಣಕ್ಕಿಳಿದರೆ ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಾಂಗ್ರೆಸ್ ನಲ್ಲಿ ಇಲ್ಲ. ಹೆಚ್ ಡಿ ಕೆ ಸ್ಪರ್ಧೆ ಮಾಡಿದರೆ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಸಾಧ್ಯತೆ ಹೆಚ್ಚು. ಅಲ್ಲದೇ ಕುಮಾರಸ್ವಾಮಿ ಸ್ಪರ್ಧೆಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಬಹುದು ಈ ನಿಟ್ಟಿನಲ್ಲಿ ಹೆಚ್ ಡಿ ಕೆ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗಿದೆ.