ಮೈಸೂರು: ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ 5 ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ನಿಲ್ಲಿಸಲು ಈಗ ಸರ್ಕಾರ ನೆಪಗಳನ್ನು ಹುಡುಕುತ್ತಿದೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಬಾರದು. ಗ್ಯಾರಂಟಿ ಯೋನೆಗಳಿಂದ ಸಾಕಷ್ಟು ಜನರಿಗೆ ಅನುಕೂಲವಾಗುತ್ತಿದೆ. ಹಲವರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಆದರೆ ಬೆಲೆ ಏರಿಕೆ ಮಾಡಿ ಅವರಿಂದಲೇ ಕಿತ್ತು ಅವ್ರಿಗೆ ಕೊಡುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಮಧ್ಯಮ ವರ್ಗದ ಜನರ ಬದುಕಿನ ಜೊತೆ ಸರ್ಕ್ಲಾರ ಚಲ್ಲಾಟ ಆಡುವುದನ್ನು ನಿಲ್ಲಿಸಬೇಕು, ಅತ್ತೆಯದನ್ನು ಅಳಿಯ ದಾನ ಮಾಡಿದ ಎಂಬಂತೆ ಅವರಿಂದಲೇ ಕಿತ್ತು ಅವರಿಗೆ ಕೊಡಲು ಇವರೇ ಆಗ್ಬೇಕಾ? ಎಂದು ಸಾರಿಗೆ ದರ ಏರಿಕೆಗೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.