
ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲವೇನಿಲ್ಲ. ನ್ಯಾಯಯುತವಾಗಿ ಟಿಕೆಟ್ ನಮಗೇ ಸಿಗಬೇಕು ಎಂದಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ಶಿಗ್ಗಾಂವಿ ಹಾಗೂ ಸಂಡೂರು ಎರಡೂ ಕ್ಷೇತ್ರಕ್ಕೆ ಬಿಜೆಪಿ ನಾಯಕರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್ ನಮಗೆ ಕೊಡ್ಬೇಕು ಎಂದು ಹೇಳಿದರು.
ಸಿ.ಪಿ.ಯೋಗೇಶ್ವರ್ ಕೂಡ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕು ಅಂತಿದ್ದಾರೆ. ಎನ್ ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ನೋಡೋಣ. ಇಂದು ಸಂಜೆ ವೇಳೆಗೆ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಹೇಳಿದರು.