alex Certify BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ HDK

ಬೆಂಗಳೂರು: ಹೆಚ್.ಡಿ.ಕೆ ಅವರದ್ದು 1000 ಎಕರೆ ಭೂಮಿ ಇದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನನ್ನದು 48 ಎಕರೆ ಮಾತ್ರ ಭೂಮಿಯಿದೆ. ರಾಜಕಾರಣಕ್ಕೂ ಬರುವ ಮೊದಲೇ ನಾನು ಜಮೀನು ಖರೀದಿಸಿದ್ದೆ. ಚಿತ್ರರಂಗದಲ್ಲಿ ನಿರ್ಮಾಪಕ, ಹಂಚಿಕೆದಾರನಾಗಿದ್ದಾಗ ಆಸ್ತಿ ಖರೀದಿಸಿದ್ದೆ ಎಂದು ಹೇಳಿದ್ದಾರೆ.

50 ಟನ್ ಕಲ್ಲಂಗಡಿ ಬೆಳೆದಿದ್ದೇನೆ, ವಿಡಿಯೋ ಮಾಡಿದ್ದೇನೆ. 55 ಲಕ್ಷ ಮೌಲ್ಯದ ಬಾಳೆ ಬೆಳೆ ಬೆಳೆದಿದ್ದೇನೆ. 20 ಟನ್ ಕೊಬ್ಬರಿ ಬೆಳೆದು ಸ್ಟಾಕ್ ಇಟ್ಟಿದ್ದೇನೆ. ನಾನು ಬೆಳೆದ ಬೆಳೆಯ ಎಲ್ಲಾ ವಿಡಿಯೋ ಮಾಡಿದ್ದೇನೆ. ಕಷ್ಟಪಟ್ಟು ದುಡಿದು ಹಣ, ಆಸ್ತಿ ಸಂಪಾದನೆ ಮಾಡಿದ್ದೇನೆ. ನಾನು ಇವರಿಂದ ಕಲಿಯಬೇಕಾಗಿಲ್ಲ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...