ಶಿವಮೊಗ್ಗ: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈ ವಿಚಾರದಲ್ಲಿ ನನ್ನ ಹಾಗೂ ನನ್ನ ತಂದೆಯ ಮೇಲೆ ಸಂಶಯಪಡಬೇಡಿ ಎಂದರು.
ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡಲಾಗಿದೆ. ಯಾರು ಎಲ್ಲಿಗೆ ಹೋಗ್ತಾರೆ ಎಂದು ಕಾಯಲು ಆಗುತ್ತಾ? ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಜೆಡಿಎಸ್-ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ, ಈ ಕೇಸ್ ಗೂ ಬಿಜೆಪಿ, ಎನ್ ಡಿಎ ಗೂ ಸಂಬಂಧವಿಲ್ಲ. ಕುಮಾರಸ್ವಾಮಿಗೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದರು.