ಮೈಸೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನವರು ಭಿಕ್ಷೆ ಬೇಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಮೈಸೂರುನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ನವರು ಭಿಕ್ಷೆ ಬೇಡಲು ಚೊಂಬು ಹಿಡಿದು ನಿಂತಿದ್ದಾರೆ. ಖಜಾನೆ ಖಾಲಿ ಮಾಡಿದ್ದೇವೆ ಭಿಕ್ಷೆ ಹಾಕಿ ಎಂದು ಚೊಂಬು ಹಿಡಿದು ಧರಣಿ ನಡೆಸುತ್ತಿದ್ದಾರೆ ಎಂದು ಟಾಂಗ್ ನೀಡಿದರು.
ಇದೇ ವೇಳೆ ಮಂಡ್ಯದಲ್ಲಿ ಹೆಚ್.ಡಿ.ಕೆ. ಪರ ಸುಮಲತಾ ಅಂಬರೀಶ್ ಪ್ರಚಾರ ಮಾಡುವ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ಹೇಳಿದ ಕಡೆ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಇನ್ನೂ ಮೂರು ದಿನ ಇದೆ ನೋಡೋಣ ಎಂದು ಹೇಳಿದರು.