BIG NEWS: ರೈತ ಕೇಳುತ್ತಿರುವುದು ತನ್ನ ಹಕ್ಕನ್ನು, ಭಿಕ್ಷೆಯನ್ನಲ್ಲ; ಸಚಿವರು ಬೇಷರತ್ ಕ್ಷಮೆ ಕೇಳಲಿ; ಮಾಜಿ ಸಿಎಂ HDK ಆಗ್ರಹ

ಬೆಂಗಳೂರು: ರೈತರ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡನೀಯ. ಅನ್ನದಾತನ ಸಂಕಷ್ಟವನ್ನು ಅವಮಾನಿಸುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಕೃಷಿ ಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ನೆನೆಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ತಕ್ಷಣ ಬೇಷರತ್ ಆಗಿ ಕ್ಷಮೆ ಕೆಳಲಿ ಹಾಗೂ ತಮ್ಮ ಹೇಳಿಕೆಯನ್ನು ಹಿಂಪಡೆಯಲಿ ಎಂದು ಆಗ್ರಹಿಸಿದ್ದಾರೆ.

ರೈತರ ಕಷ್ಟಗಳನ್ನು ಅವಮಾನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಎಚ್ಚರಿಕೆ, ಸೂಕ್ಷ್ಮತೆಯಿಂದ ಮಾತನಾಡಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read