BIG NEWS: ಸಿಎಂ ಸಿದ್ದರಾಮಯ್ಯ ಏನ್ ದೆವ್ವನಾ? ಭಯಪಡೋಕೆ: HDK ಟಾಂಗ್

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಗೆ ನನ್ನನ್ನು ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಏನು ದೆವ್ವನಾ? ಭಯಪಡೋಕೆ? ಎಂದು ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನನ್ನು ಹೆದರಿಸಲು ಯಾರಿಂದಲೂ ಸಾಧ್ಯವಿಲ್ಲ. ನಾನು ಯಾರಿಗೂ ಹೆದರಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಏನು ದೆವ್ವನಾ? ಭಯಬೀಳೋಕೆ. ದೆವ್ವ ಆಗಿದ್ದರೆ ಭಯ ಪಡಬೇಕು. ದೆವ್ವ ಅಲ್ಲ ಅಲ್ವಾ? ಹಾಗಾದರೆ ನಾನೇಕೆ ಭಯಪಡಲಿ? ಎಂದು ಕೇಳಿದ್ದಾರೆ. ಸಿದ್ದರಾಮಯ್ಯನವರಂತ ಲಕ್ಷ ಜನರು ಬಂದರೂ ಹೆದರಲ್ಲ ಎಂದಿದ್ದಾರೆ.

ನಾನು ರಾಜಕೀಯಕ್ಕೆ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೇನಾ? ಸ್ವಂತ ದುಡಿಮೆ, ಕಾರ್ಯಕರ್ತರ ದುಡಿಮೆ ಮೇಲೆ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ಹಾಗೆ ನೋಡಿದರೆ ಸಿದದ್ರಾಮಯ್ಯ ಅವರು ನನ್ನ ಪಕ್ಷದ ಕಾರ್ಯಕರ್ತ. ಮಾಜಿ ಪ್ರಧಾನಿ ದೇವೇಗೌಡರ ನೆರಳಲ್ಲಿ ಬಂದವರು ಎಂದು ಕಿಡಿಕಾರಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read