ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದೆ. ರೇವಣ್ಣ ಕುಟುಂಬ ಕೊಂಚ ನಿರಾಳವಾದಂತಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮಿಸುವುದು ಬೇಡ. ಇದು ಸಂತಸಪಡಿವ ಸಮಯವಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ರಾಜ್ಯದಲ್ಲಿ ಹೀನಾಯ ಘಟನೆ ನಡೆದಿದೆ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದು ಎಂದು ಹೇಳಿದರು.
ನಮಗೆ ಜನ್ಮ ಕೊಟ್ಟ ತಂದೆ-ತಾಯಿ ಇದ್ದಾರೆ. ಒಡಹುಟ್ಟಿದವರಿದ್ದಾರೆ. ಎಸ್ಐಟಿ ಈವರೆಗೂ ಪೆನ್ ಡ್ರೈವ್ ಪ್ರಕರಣ ಟಚ್ ಮಾಡಿಲ್ಲ. ಪೆನ್ ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರಕ್ಕೆ ಸಂತ್ರಸ್ತರ ಬಗ್ಗೆ ಕಿಂಚಿತ್ತಾದರೂ ಕಾಳಜಿ ಎಂಬುದು ಇದೆಯೇ? ಎಂದು ಪ್ರಶಿಸಿದ್ದಾರೆ.