alex Certify BIG NEWS: ಶಾಲಾ, ಕಾಲೇಜ್ ಆರಂಭಿಸಿದ್ರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮಕ್ಕೆ ನಾಂದಿ – HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲಾ, ಕಾಲೇಜ್ ಆರಂಭಿಸಿದ್ರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮಕ್ಕೆ ನಾಂದಿ – HDK ಆಕ್ರೋಶ

‘ಶಾಲಾ, ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತೆ ಆಗುತ್ತದೆ. ಹುಷಾರ್..! ಇಂತಹ ಯಾವುದೇ ನಿರ್ಧಾರ ಕೈಗೊಳ್ಳಬಾರದು.’

ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದು, ಶಾಲಾ, ಕಾಲೇಜ್ ಆರಂಭಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶಾಲೆ, ಕಾಲೇಜುಗಳನ್ನು ಆರಂಭಿಸಲು ಶಿಕ್ಷಕ ಸಮುದಾಯ, ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಸಂಗ್ರಹಿಸುತ್ತಿರುವುದೇನೋ ಸರಿ. ಆದರೆ, ಅತಿರೇಕದ ನಿರ್ಧಾರ ಅನಾಹುತಕ್ಕೆ ದಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.

ನೆರೆಯ ಆಂಧ್ರಪ್ರದೇಶದಲ್ಲಿ ಶಾಲೆ ಆರಂಭವಾದ ಮೂರೇ ದಿನದಲ್ಲಿ 260 ಹೆಚ್ಚು ಮಕ್ಕಳು ಮತ್ತು 160ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೋನಾ ಸೋಂಕು ತಗುಲಿರುವ ವರದಿ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ. ಇದು ರಾಜ್ಯದಲ್ಲಿ ಪೋಷಕರ ಜಂಘಾಬಲವನ್ನೇ ಉಡುಗಿಸಿದೆ. ಸರ್ಕಾರ ಜನಾಭಿಪ್ರಾಯ ಸಂಗ್ರಹಿಸಲಿ. ಆದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಮುದಾಯದ ಪ್ರಾಣದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ನಾಗರಿಕ ಸಮಾಜ ಒಪ್ಪುವುದಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಶಾಲಾ-ಕಾಲೇಜುಗಳನ್ನು ಆರಂಭಿಸುವುದು ಬೇಡವೆಂದು ಸಲಹೆ ನೀಡಿದ್ದೆ ಎಂದು ಹೇಳಿದ್ದಾರೆ.

ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲೆ, ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಶಾಲಾ ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲೆ, ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...