ಬೆಂಗಳೂರು: ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಎಸ್ ಐಟಿ ಅನುಮತಿ ಕೇಳಿದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, 2017ರಲ್ಲಿ ಎಸ್ ಐಟಿ ಅಧಿಕಾರಿಗಳು ನೋಟಿದ್ಸ್ ಕೊಟ್ಟರು. 2018ರಲ್ಲಿ ನಾನು ಮನಸ್ಸು ಮಾಡಿದರೆ ಕೇಸ್ ಮುಚ್ಚಿ ಹಾಕಬಹುದಿತ್ತು. ಒಬ್ಬ ಅಧಿಕಾರಿಯ ಮೂಲಕ ಹೆಚ್.ಡಿ.ಕೆ ಬಂಧಿಸಬೇಕೆಂದು ಪ್ಲಾನ್ ನಡೆದಿದೆ. ವಕೀಲರ ಸೂಚನೆ ಮೇರೆಗೆ ಜಾಮೀನು ಪಡೆದು ಹೋದೆ. ಇದಕ್ಕೇಕೆ ಜಾಮೀನು ಪಡೆದ್ರಿ? ಎಂದು ಅಧಿಕಾರಿಗಳು ಕೇಳಿದರು. 208ರಲ್ಲಿ ಎಸ್ ಐಟಿ ಅಧಿಕಾರಿಗಳು ರಿಪೋರ್ಟ್ ಸಲ್ಲಿಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ಸಿಗರ ಜೊತೆ ಸೇರಿ ಸರ್ಕಾರ ಮಾಡಬೇಕಾಗಿ ಬಂತು ಎಂದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ನ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಪೊನ್ನಣ ಅವರೇ ನೀವೊಬ್ಬರೇ ಅಲ್ಲ ಕಾನೂನು ತಜ್ಞರು. ಮುಖ್ಯಮಂತ್ರಿಗಳ ಮನೆಯಿಂದಲೇ ನನಗೆ ಮಾಹಿತಿ ಕೊಡ್ತಾರೆ. ನೀವೊಬ್ಬರೇ ಬುದ್ಧಿವಂತರೇ? ಎಲ್ಲಾ ಮಾಹಿತಿಗಳು ನನಗೆ ಲಭ್ಯವಾಗುತ್ತದೆ ಎಂದರು. ಸರ್ಕಾರದ ಮಟ್ಟದಲ್ಲಿ ದಾಖಲೆಗಳು ಇದೆಯೋ ಇಲ್ಲವೋ ಗೊತ್ತಿಲ್ಲ. ತನಿಖೆ ನಡೆಸುತ್ತಿರುವ ಎಸ್ ಐಟಿ ಬಳಿ ದಾಖಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ನಾನು ಮಾತ್ರ ದಾಖಲೆಗಳನ್ನು ಭದ್ರವಾಗಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದ್ದಾರೆ.