
ನವದೆಹಲಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.
ಕೇಂದ್ರ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ ಕೆಐಒಸಿಎಲ್ ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು. ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು ಎಂದು ಹೆಚ್.ಡಿ.ಕೆ. ತಿಳಿಸಿದ್ದಾರೆ.