
ಬೆಂಗಳೂರು: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.
ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುದ್ದಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಮಹಿಳೆರ ಘನತೆ, ಚಾರಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ನೋಟಿಸ್ ನೀಡಲಿದೆ.