
ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದಾಗ ನಿಖಿಲ್ ವಿಧಾನಸೌಧಕ್ಕೆ ಬಂದಿದ್ನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಜೆಡಿಎಸ್ ಪಕ್ಷದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ನಿಖಿಲ್ ವರ್ಗಾವಣೆ ಹೆಸರಲ್ಲಿ ಲೂಟಿ ಮಾಡಿದ್ನಾ? ಆದರೆ, ಇವತ್ತು ರಾಜ್ಯದಲ್ಲಿ ವರ್ಗಾವಣೆ ಹೆಸರಲ್ಲಿ ಹಣ ಲೂಟಿ ನಡೆಯುತ್ತಿದೆ ಎಂದು ಹೆಚ್.ಡಿ.ಕೆ. ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಯಾವ ಪಕ್ಷವು ಕೌಟುಂಬಿಕ ರಾಜಕಾರಣದಿಂದ ಹೊರತಾಗಿಲ್ಲ. ಪ್ರಜ್ವಲ್, ನಿಖಿಲ್ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ ಎಂದು ಸಲಹೆ ನೀಡಿದ್ದಾರೆ.