alex Certify BIG NEWS: ಹರಿಪ್ರಸಾದ್ ಒಬ್ಬರೇ ಅಲ್ಲ; ಇನ್ನೂ ಹಲವರು ಇದ್ದಾರೆ; 50 ಜನರನ್ನು ಕರೆದುಕೊಂಡು ಬರುವ ಬಗ್ಗೆ ಮಾಹಿತಿ ಇದೆ; HDK ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹರಿಪ್ರಸಾದ್ ಒಬ್ಬರೇ ಅಲ್ಲ; ಇನ್ನೂ ಹಲವರು ಇದ್ದಾರೆ; 50 ಜನರನ್ನು ಕರೆದುಕೊಂಡು ಬರುವ ಬಗ್ಗೆ ಮಾಹಿತಿ ಇದೆ; HDK ಹೊಸ ಬಾಂಬ್

ಹಾಸನ: ಕಾಂಗ್ರೆಸ್ ನ ಆಂತರಿಕ ಜಗಳ ತಾರಕಕ್ಕೇರಿದೆ. ಬಿ.ಕೆ.ಹರಿಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಂಬ್ ಸಿಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾನು 50 ಜನರನ್ನು ಕರೆದುಕೊಂಡು ಬರುತ್ತೇನೆ ಎಂದು ಕೇಂದ್ರ ನಾಯಕರ ಬಳಿ ಹರಿಪ್ರಸಾದ್ ಮಾತನಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಇಲ್ಲಿ ಯಾರು ಯಾರಿಗೂ ನಿಷ್ಠೆ ಪ್ರಾಮಾಣಿಕತೆ ಎಂಬುದು ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಹರಿಪ್ರಸಾದ್ ಒಬ್ಬರೇ ಅಲ್ಲ, ಇನ್ನೂ ಹಲವರು ಅಸಮಾಧಾನಿತರು ಇದ್ದಾರೆ. ಹರಿಪ್ರಸಾದ್ ಧೈರ್ಯವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಅಷ್ಟೇ ಎಂದರು.

ಈ ಸರ್ಕಾರ ಮುಂದೆ ಏನಾಗುತ್ತೆ ಲೋಕಾಸಭಾ ಚುನಾವಣೆ ಮುಗಿದ ಬಳಿಕ ಗೊತ್ತಾಗುತ್ತದೆ. ಯಾರೂ ಪ್ರಾಮಾಣಿಕರು ಇಲ್ಲ. ಎಲ್ಲ ಅವರವರ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ ಎಂದು ಹೇಳಿದರು. ಕುಮಾರಸ್ವಾಮಿಯವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...