ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಪೆನ್ ಡ್ರೈವ್ ಪ್ರದರ್ಶಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಇತ್ತೀಚೆಗಷ್ಟೇ ಎರಡು ಬಾರಿ ವಿದೇಶ ಪ್ರವಾಸ ಮುಗಿಸಿ ಬಂದಿದ್ದರು. ಈಗ ಮತ್ತೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ದುಬೈಗೆ ತೆರಳಿದ್ದಾರೆ. ರಾಜ್ಯ ರಾಜಕೀಯ ನಾಯಕರಲ್ಲಿ ಅತಿ ಹೆಚ್ಚು ವಿದೇಶ ಪ್ರವಾಸ ಮಾಡುವವರೆಂದರೆ ಹೆಚ್.ಡಿ.ಕುಮಾರಸ್ವಾಮಿಯೇ ಇರಬಹುದು ಎಂಬ ಮಾತು ಕೂಡ ಕೇಳಿಬರುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಮೂಲಕ ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ದುಬೈನ ಕೆಂಪೇಗೌಡ ಸಂಘದವರು ಚಿಕ್ಕದೊಂದು ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ಅದರಲ್ಲಿ ಭಾಗಿಯಾಗಲು ಹೋಗುತ್ತಿರುವುದಾಗಿ ಹೇಳಿದ್ದಾರೆ.