
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಹೋರಾಟಗಾರರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸಿ.ಎಸ್.ಸಿದ್ದರಾಜು ಎಂಬುವವರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.
2004ರ ವಿಧಾನಸಭಾ ಚುನಾವಣೆ ವೇಳೆ ಕೇತಗಾನಹಳ್ಳಿಯಲ್ಲಿ 24 ಎಕರೆ ಜಮೀನು ಇರುವ ಬಗ್ಗೆ ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದರು. ಚಿಕ್ಕಮ್ಮ ಸಾವಿತ್ರಮ್ಮ ಅವರಿಂದ ಜಮೀನು ದಾನ ಪಡೆದಿದ್ದಾಗಿ ಮಾಹಿತಿ ನೀಡಿದ್ದರು. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ? ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು? ಪೂರ್ಣ ಪ್ರಮಾಣದ ಮಾಹಿತಿ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ಸಿದ್ದರಾಜು ದೂರು ನೀಡಿದ್ದಾರೆ.