ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ.
ಕೊಬ್ಬರಿ ಬೆಳೆಗಾರರು ಹಾಗೂ ರೈತರೊಂದಿಗೆ ಪಾದಯಾತ್ರೆಗೆ ಸಜ್ಜಾಗಿದ್ದು, ಜನವರಿ ಮೊದಲ ವಾರದಲ್ಲಿ ಹಾಸನದಿಂದ ತುಮಕೂರಿನವರೆಗೆ ಪಾದಯಾತ್ರೆ ನಡೆಸಲಿದ್ದಾರೆ.
ನಾಲ್ಕು ತಾಲೂಕುಗಳ ಮೂಲಕ 120 ಕಿ.ಮೀ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಹಾಸನದ ಅರಸಿಕೆರೆ, ತಿಪಟೂರು, ತುರುವೆಕೆರೆ, ತುಮಕೂರಿನಲ್ಲಿ ಹತ್ತು ದಿನಗಳ ಕಾಲ ಪಾದಯಾತ್ರೆ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಕೊಬ್ಬರಿ ಬೆಂಬಲ ಬೆಲೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್ ವಿರುದ್ಧ ಹೋರಟಕ್ಕೆ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.