alex Certify BIG NEWS: ಯತೀಂದ್ರಗೆ ನೀಡಿರುವ ಸಂವಿಧಾನಿಕ ಹುದ್ದೆಯಾದರೂ ಯಾವುದು?; ಸಿದ್ದರಾಮಯ್ಯ ವಿರುದ್ಧ ಮತ್ತೆ ಹರಿಹಾಯ್ದ ಮಾಜಿ ಸಿಎಂ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯತೀಂದ್ರಗೆ ನೀಡಿರುವ ಸಂವಿಧಾನಿಕ ಹುದ್ದೆಯಾದರೂ ಯಾವುದು?; ಸಿದ್ದರಾಮಯ್ಯ ವಿರುದ್ಧ ಮತ್ತೆ ಹರಿಹಾಯ್ದ ಮಾಜಿ ಸಿಎಂ HDK

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಭಾಷಣೆ ಬಗ್ಗೆ ವರ್ಗಾವಣೆ ದಂಧೆ ಆರೋಪ ಮಾಡಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಯತೀಂದ್ರಗೆ ನೀಡಿರುವ ಸಂವಿಧಾನಿಕ ಹುದ್ದೆ ಯಾವುದು? ಎಂದು ಪ್ರಶ್ನಿಸಿದ್ದಾರೆ.

ವಿಡಿಯೋ ವಿಷಯದ ಬಗ್ಗೆ ಅನಗತ್ಯವಾಗಿ ವಿಷಯಾಂತರ ಮಾಡುವುದು ಬೇಡ. ನಾನು ಕೇಳುತ್ತಿರುವುದೇನು? ನೀವು ಹೇಳುತ್ತಿರುವುದೇನು? ಯತೀಂದ್ರ ಸಿದ್ದರಾಮಯ್ಯನವರಿಗೆ ನೀಡಿರುವ ಸಂವಿಧಾನಿಕ ಹುದ್ದೆ ಯಾವುದು? ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಒಂದು ವಿಡಿಯೋ ಬಗ್ಗೆ ಪ್ರಶ್ನಿಸಿದ್ದಕ್ಕೆ ನಿಮಗೆ, ನಿಮ್ಮ ಸಂಪುಟಕ್ಕೆ ನಿದ್ದೆಯೇ ಹಾರಿ ಹೋಗಿದೆ. ಕೆಲಸ ಬಿಟ್ಟು ನಿಮಗೆ ಸುವ್ವಿಸುವ್ವಾಲೆ ಹಾಡುತ್ತಿದೆ. ಅವರು ಸಚಿವರೋ, ನಿಮ್ಮ ಗಸ್ತಿಗೆ ನಿಂತ ಬೌನ್ಸರ್ ಗಳೋ? ಸಚಿವರನ್ನು ಗುಂಪು ಗುಂಪಾಗಿ ಛೂ ಬಿಟ್ಟರೆ ಕುಮಾರಸ್ವಾಮಿ ಹೆದರಿ ಓಡುತ್ತಾರೆಂದು ಭಾವಿಸಿದರೆ ಅದು ನಿಮ್ಮ ಪೆದ್ದುತನವಷ್ಟೇ ಎಂದು ಟಾಂಗ್ ನೀಡಿದ್ದಾರೆ.

ನಿಮ್ಮ ಪುತ್ರನಿಗೆ ವರುಣಾ ಕ್ಷೇತ್ರದ ಹೊರಗುತ್ತಿಗೆ ಯಾಕೆ? ನಾನು ಸಿಎಂ ಆಗಿದ್ದಾಗ ನನ್ನ ಮಗನಿಗೆ ನನ್ನ ಕ್ಷೇತ್ರದ ಹೊರ ಗುತ್ತಿಗೆ ಕೊಟ್ಟಿದ್ದಿಲ್ಲ. ನಿಮ್ಮ ಪುತ್ರನನ್ನು ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದೀರಿ. ಅವರ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಸಲು ಹಾಗೂ ಸರ್ಕಾರಿ ಅಧಿಕಾರಿಗಳ ಸಭೆ ನಡೆಸಿ ದರ್ಬಾರ್ ಮಾಡಲು ಅನುವು ಮಾಡಿಕೊಟ್ಟಿದ್ದೀರಿ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ?

ಈವರೆಗೂ ಯಾವ ಸಿಎಂ ಕೂಡ ಸ್ವಕ್ಷೇತ್ರದ ಹೊರಗುತ್ತಿಗೆ ಮಕ್ಕಳಿಗೆ ಕೊಟ್ಟಿದ್ದಿಲ್ಲ. ನೀವು ಕೊಟ್ಟು ಮೇಲ್ಪಂಕ್ತಿ ಹಾಕಿದ್ದೀರಿ. ಹಿಂಬಾಗಿಲಿನಿಂದ ಮಗನಿಗೆ ಅಧಿಕಾರ ಕೊಡಲು ಕೆಡಿಪಿ ಪಟ್ಟ ಕಟ್ಟಿದ್ದೀರಿ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿರುವ ಯಾವುದಾದರೂ ವಿಧಿ-ವಿಧಾನಗಳಿವೆಯೆ? ತಿಳಿಸಿ ಎಂದು ಆಗ್ರಹಿಸಿದ್ದಾರೆ.

ನನಗೆ ತಿಳಿದಂತೆ CSR ಎಂದರೆ Corporate social responsibility. ಈಗ ಅದು Corrupt Son Of Siddaramaiah ಆಗಿದೆ. ರಾಜ್ಯದಲ್ಲಿ ಸಿಎಸ್ ಆರ್ ಕಲೆಕ್ಷನ್ ಗೆ ನಿಮ್ಮ ಮಗನಿಗೆ ನೀವೇ ಹೊರಗುತ್ತಿಗೆ ಕೊಟ್ಟಿದ್ದೀರಾ? 224 ಕ್ಷೇತ್ರಗಳ ಸಿಎಸ್ ಆರ್ ಉಸ್ತುವಾರಿ ಅವರದ್ದೇನಾ? ಎಂದು ಕೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...