ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ನೀಡಿವಂತೆ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜಾಮೀನು ಅರ್ಜಿ ವಿಚಾರಣೆ ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.
ಕೆ.ಆರ್.ನಗರ ಠಾಣೆಯಲ್ಲಿ ರೇವಣ್ಣ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ನಲ್ಲಿ ಜಾಮೀನು ರಹಿತ ಸೆಕ್ಷನ್ ಗಳಿವೆ. ಅಪಹರಣ ಹಾಗೂ ಅಕ್ರಮ ಬಂಧನ ಕೇಸ್ ದಾಖಲಾಗಿದೆ ಎಂದು ಎಸ್ ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಆದರೆ ಎಫ್ ಐ ಆರ್ ನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಅಲ್ಲದೇ ನಾಳೆ ಬೆಳಿಗ್ಗೆ ಹೆಚ್.ಡಿ.ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಿಟ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ರೇವಣ್ಣ ಪರ ವಕೀಲರು ಮನವಿ ಮಾಡಿದ್ದಾರೆ.
ಎರಡೂ ಕಡೆ ವಾದ ಆಲಿಸಿದ ಕೋರ್ಟ್, ಎಸ್ ಐಟಿ ಪರ ಎಸ್ ಪಿಪಿ ವಿಶೇಷ ಕೋರ್ಟ್ ನೋಟೀಸ್ ನೀಡಿದೆ. ಅಲ್ಲದೇ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದೆ.