
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪ ಹಾಗೂ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿದೆ.
ಬಂಧನ ಭೀತಿಯಲ್ಲಿರುವ ಹೆಚ್.ಡಿ. ರೇವಣ್ಣ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆ ನ್ಯಾಯಾಲಯ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಾಗ ರೇವಣ್ಣ ಪರ ವಕೀಲರು ರೇವಣ್ಣ ಇಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಹಾಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು. ಆದರೆ ಕೋರ್ಟ್ ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿತ್ತು.
ಆದರೆ ಹೆಚ್.ಡಿ.ರೇವಣ್ಣ ಈವರೆಗೂ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಈ ನಡುವೆ ಜನಪ್ರತಿನಿಧಿಗಳ ನ್ಯಾಯಾಲಯ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2:45ಕ್ಕೆ ಮುಂದೂಡಿದೆ.