ಬೆಂಗಳೂರು: ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರನಕ್ಕೆ ಸಬಂಧಿಸಿದಂತೆ ಹೆಚ್.ಡಿ,ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿದ್ದಾರೆ.
ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಹೆಚ್.ಡಿ.ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಸೇರಿಸಿಲ್ಲ ಎಂದು ಎಸ್ ಐಟಿ ಎಸ್ ಪಿಪಿ ಬ್ಯಾತ ಎನ್.ಜಗದೀಶ್ ಮಾಹಿತಿ ನೀಡಿದ್ದಾರೆ.
ರೇವಣ್ಣ ವಿರುದ್ಧ ಅತ್ಯಾಚಾರ ಆರೋಪವಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ. ಅವರ ವಿರುದ್ಧ ಜಾಮೀನು ನೀಡಬಹುದಾದ ಆರೋಪಗಳು ಮಾತ್ರ ಇವೆ ಎಂದು ತಿಳಿಸಿದ್ದಾರೆ. ಹಾಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಊರ್ಜಿತವಲ್ಲ. ಈ ದಿನದವರೆಗೆ ಜಾಮೀನುರಹಿತ ಪ್ರಕರಣ ದಾಖಲಾಗಿಲ್ಲ ಎಂದು ವಾದ ಮಂಡಿಸಿದ್ದಾರೆ.
ಹೈಕೋರ್ಟ್ ಗೆ ಎಸ್ ಪಿಪಿ ನೀಡಿದ ಮಾಹಿತಿಯನ್ನು ಕೋರ್ಟ್ ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದಿದ್ದಾರೆ.