ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ.
ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಮಧ್ಯಾಹ್ನ 12:15ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
ಕಳೆದ ಐದು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಹೆಚ್.ಡಿ.ರೇವಣ್ಣ ಇಂದು ಜಾಮೀನು ಸಿಗುವ ನಿರೀಕ್ಷೇಯಲ್ಲಿದ್ದು, ಕೋರ್ಟ್ ತೀರ್ಮಾನ ಕಾದುನೋಡಬೇಕಿದೆ.