ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ, ಜೈಲಿನಿಂದ ನೇರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದಾರೆ.
ಮಹಿಳೆ ಕಿದ್ನ್ಯಾಪ್ ಕೇಸ್ ನಲ್ಲಿ ಹೆಚ್.ಡಿ.ರೇವಣ್ಣಗೆ ಮೇ.13ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹದಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ನೇರವಾಗಿ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಹೆಚ್.ಡಿ.ರೇವಣ್ಣ ತಂದೆ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರ ಆಶಿರ್ವಾದ ಪಡೆದರು.
ಈ ವೇಳೆ ದೇವೇಗೌಡರ ಜೊತೆ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಸಮಾಲೋಚನೆ ನಡೆಸಿದರು.
ಮಹಿಳೆ ಕಿಡ್ನ್ಯಾಪ್ ಕೇಸ್ ಆರೋಪದಲ್ಲಿ ಮೇ 4ರಂದು ಹೆಚ್.ಡಿ.ದೇವೇಗೌಡರ ನಿವಾಸದಲ್ಲಿದ್ದಾಗಲೇ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.