ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಹೆಚ್.ಡಿ.ರೇವಣ್ಣಗೆ ನಾಳೆ ಮಧ್ಯಾಹ್ನದವರೆಗೂ ಜಾಮೀನು ಮಂಜೂರು ಮಾಡಿದ್ದು, ನಾಳೆ ಮಧ್ಯಾಹ್ನ ಮತ್ತೆ ಅರ್ಜಿ ವಿಚಾರಣೆ ನಡೆಸಲಿದೆ. ಅಲ್ಲದೇ ಇಬ್ಬರು ಶ್ಯೂರಿಟಿ ಹಾಗೂ 5 ಲಕ್ಷ ಬಾಂಡ್ ಒದಗಿಸುವಂತೆ ಕೋರ್ಟ್ ಷರತ್ತು ವಿಧಿಸಿದೆ.
ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡಿಗಡೆಯಾಗಿದ್ದ ರೇವಣ್ಣ ಇದೀಗ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿಯೂ ಕೊಂಚ ರಿಲೀಫ್ ಸಿಕ್ಕಿದ್ದು, ನಾಳೆ ಮಧ್ಯಾಹ್ನ ಕೋರ್ಟ್ ಅಂತಿಮ ಆದೇಶ ಹೊರಡಿಸಲಿದೆ.