ಮೈಸೂರು: ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತ ಮಹಿಳೆಯನ್ನು ಎಸ್ ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ.
ಮೈಸೂರು ಜಿಲ್ಲೆಯ ಹಣಸೂರು ತಾಲ್ಲೂಕಿನ ಕಾಳೇನಹಳ್ಳಿಯ ಮನೆಯಲ್ಲಿ ಸಂತ್ರಸ್ತ ಮಹಿಳೆ ಪತ್ತೆಯಾಗಿದ್ದು, ಎಸ್ ಐಟಿ ಅಧಿಕಾರಿಗಳು ರಕ್ಷಿಸಿ ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಸಂತ್ರಸ್ತ ಮಹಿಳೆ ಹೆಚ್.ಡಿ.ರೇವಣ್ಣ ಅವರ ಆಪ್ತಸಹಾಯಕ ರಾಜಶೇಖರ್ ಅವರ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ. ಏಪ್ರಿಲ್ 29ರಿಂದಲೂ ಮಹಿಳೆ ಅಲ್ಲಿಯೇ ಇದ್ದರು ಎಂದು ತಿಳಿದುಬಂದಿದೆ.
ಮೈಸೂರಿನ ಕೆ.ಆರ್.ನಗರದಿಂದ ಹೆಚ್.ಡಿ.ರೇವಣ್ಣ ಸಂಬಂಧಿ ಸತೀಶ್ ಬಾಬು ಎಂಬುವವರು ಸಂತ್ರಸ್ತ ಮಹಿಳೆಯನ್ನು ಏಪ್ರಿಲ್ 29ರಂದು ಕರೆದೊಯ್ದಿದ್ದು, ಅಂದಿನಿಂದಲೂ ರಾಜಶೇಖರ್ ಅವರ ತೋಟದ ಮನೆಯಲ್ಲಿಯೇ ಮಹಿಳೆಯನ್ನು ಇರಿಸಲಾಗಿತ್ತು ಎಂದು ತಿಳಿದುಬಂದಿದೆ.
ಇನ್ನು ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ರೇವಣ್ಣ ಪಿಎ ರಾಜಶೇಖರ್ ಪರಾರಿಯಾಗಿದ್ದು, ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ.